ಸುಖಬೀರ್ ಸಿಂಗ್ ಬಾದಲ್
ಅಮೃತಸರ: ಪಂಜಾಬ್‌ನ ಮಾಜಿ ಉಪ ಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅವರು ಶಿರೋಮಣಿ ಅಕಾಲಿ ದಳ ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಶನಿವಾರ ಮರು ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷದ ಅಧ್ಯಕ್ಷರಾಗಿ ಚುನಾಯಿತರಾಗಿದ್ದ ಸುಖ್‌ಬೀರ್, ಈ ಸ್ಥಾನಕ್ಕೇರಿದ ಕಿರಿಯ ವ್ಯಕ್ತಿ ಆಗಿದ್ದಾರೆ.
2007ರಿಂದ 2017ರವರೆಗೆ ಪಂಜಾಬ್‌ನಲ್ಲಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಅದರ ಸರ್ಕಾರ ಮಾಡಿದ ತಪ್ಪುಗಳಿಗಾಗಿ ಸಿಖ್ ಧರ್ಮದ ಅತ್ಯುನ್ನತ ಗುರುಗಳು ಸುಖ್‌ಬೀರ್ ಸಿಂಗ್ ಬಾದಲ್ ಅವರಿಗೆ ‘ತನಖಾಹ್’ (ಧಾರ್ಮಿಕ ಶಿಕ್ಷೆ) ವಿಧಿಸಿದ್ದರು. ಬಳಿಕ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಳೆದ ಡಿಸೆಂಬರ್‌ನಲ್ಲಿ ಅಮೃತಸರದ ಸ್ವರ್ಣ ಮಂದಿರದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಮಾಜಿ ಖಾಲಿಸ್ತಾನಿ ಉಗ್ರನೊಬ್ಬ ನಡೆಸಿದ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದರು.
ನನಗೆ ಈ ಜವಾಬ್ದಾರಿ ನೀಡಿದ್ದಕ್ಕಾಗಿ ಧನ್ಯವಾದಗಳು. ಪಂಜಾಬ್ ಅನ್ನು ಮತ್ತೆ ನಂ.1 ರಾಜ್ಯವನ್ನಾಗಿ ಮಾಡಲಾಗುವುದು ಎಂದು ಜನರಿಗೆ ಭರವಸೆ ನೀಡುತ್ತೇನೆ– ಸುಖ್‌ಬೀರ್ ಸಿಂಗ್ ಬಾದಲ್ ಶಿರೋಮಣಿ ಅಕಾಲಿ ದಳ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.