
ಮುಂಬೈ: ಮಹಾರಾಷ್ಟ್ರದಲ್ಲಿ ಎನ್‌ಸಿಪಿ (ಅಜಿತ್) ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಶನಿವಾರ ಆಯ್ಕೆ ಮಾಡಲಾಗಿದೆ.
ಇಂದು ಮಧ್ಯಾಹ್ನ ನಡೆದ ಎನ್‌ಸಿಪಿ ಶಾಸಕಾಂಗ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದಕ್ಕೂ ಮುನ್ನ ಸುನೇತ್ರಾ ಅವರು ಎನ್‌ಸಿಪಿ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತತ್ಕರೆ ಹಾಗೂ ಎನ್‌ಸಿಪಿಯ ಕಾರ್ಯಾಧ್ಯಕ್ಷ ಪಟೇಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಪ್ರಫುಲ್ ಪಟೇಲ್, ಸುನಿಲ್ ತತ್ಕರೆ, ಛಗನ್ ಭುಜಬಲ್ ಸೇರಿದಂತೆ ಎನ್‌ಸಿಪಿಯ ಹಿರಿಯ ನಾಯಕರು ದಕ್ಷಿಣ ಮುಂಬೈನಲ್ಲಿರುವ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಫಡಣವೀಸ್ ಅವರನ್ನು ಭೇಟಿ ಮಾಡಿದರು. ಸುನೇತ್ರಾ, ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾರುವ ಪತ್ರವನ್ನು ಹಸ್ತಾಂತರಿಸಿದರು.
ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ, ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಿಎಂ ಫಡಣವೀಸ್ ಅವರು ಈ ಪತ್ರವನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಕಳುಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ರಾಜಭವನದಲ್ಲಿ ಸಂಜೆ 5ಗಂಟೆಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.