
ಪ್ರಜಾವಾಣಿ ವಾರ್ತೆಸುನೇತ್ರಾ ಪವಾರ್
ಮುಂಬೈ: ಮಹಾರಾಷ್ಟ್ರದಲ್ಲಿ ಎನ್‌ಸಿಪಿ (ಅಜಿತ್) ನಾಯಕಿ ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಎನ್‌ಸಿಪಿ ಮುಖಂಡರಾದ ಪ್ರಫುಲ್ ಪಟೇಲ್, ಸುನಿಲ್ ತತ್ಕರೆ, ಛಗನ್ ಭುಜಬಲ್ ಸೇರಿದಂತೆ ಹಲವರು ಹಾಜರಿದ್ದರು.
ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ, ಅವರ ಪತ್ನಿ ಸುನೇತ್ರಾ ಪವಾರ್ ಅವರು ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.