
ಸುನೇತ್ರಾ ಪವಾರ್
(ಫೇಸ್‌ಬುಕ್ ಚಿತ್ರ)
ಮುಂಬೈ: ಶಾಸಕಾಂಗ ಪಕ್ಷದ ಸಭೆಗೂ ಮುನ್ನ, ಸುನೇತ್ರಾ ಪವಾರ್ ಅವರು ಎನ್‌ಸಿಪಿ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತತ್ಕರೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ.
ಎನ್‌ಸಿಪಿಯ ಕಾರ್ಯಾಧ್ಯಕ್ಷ ಪಟೇಲ್ ಮತ್ತು ರಾಜ್ಯ ಘಟಕದ ಅಧ್ಯಕ್ಷ ತತ್ಕರೆ ಅವರು ಸುನೇತ್ರಾ ಪವಾರ್ ಅವರೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇವೇಂದ್ರ ಫಡಣವೀಸ್ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದ ಅಜಿತ್ ಪವಾರ್, ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.
ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ, ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಅವರು ರಾಜ್ಯದ ಮೊದಲ ಮಹಿಳಾ ಉಪ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.