ADVERTISEMENT

ಅಯೋಧ್ಯೆ: ಮರುಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್‌ಬೋರ್ಡ್‌ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 8:55 IST
Last Updated 26 ನವೆಂಬರ್ 2019, 8:55 IST
   

ಲಖನೌ: ಅಯೋಧ್ಯೆ ಭೂ ವಿವಾದ ಕುರಿತಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲುಸುನ್ನಿ ಕೇಂದ್ರೀಯ ವಕ್ಫ್‌ ಬೋರ್ಡ್‌ ನಿರ್ಧರಿಸಿದೆ.

ತೀರ್ಪಿನ ಸಂಬಂಧಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಮಂಗಳವಾರ ಸುನ್ನಿ ವಕ್ಫ್‌ಬೋರ್ಡ್‌ನ ಸಭೆ ಉತ್ತರಪ್ರದೇಶದಲಖನೌದಲ್ಲಿ ನಡೆಯಿತು. ಈ ಸಭೆಯಲ್ಲಿ ಮಂಡಳಿಯ 8 ಮಂದಿಯ ಪೈಕಿ 7 ಮಂದಿ ಹಾಜರಾಗಿದ್ದರು.

ಸಭೆಯ ನಂತರ ಮಾತನಾಡಿದ ವಕ್ಫ್‌ ಬೋರ್ಡ್‌ನ ರಜಾಕ್‌ ಖಾನ್‌, ‘ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಾರದು ಎಂಬುದು ಇಂದಿನ ಸಭೆಯ ಬಹುತೇಕರ ತೀರ್ಮಾನವಾಗಿದೆ,’ ಎಂದು ಅವರು ತಿಳಿಸಿದರು.

ADVERTISEMENT

ಸಭೆಯಲ್ಲಿ ಭಾಗವಹಿಸಿದ್ದವರ ಪೈಕಿ ಆರು ಮಂದಿ ಮರುಪರಿಶೀಲನಾ ಅರ್ಜಿ ಸಲ್ಲಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಇದೇ ವೇಳೆ, ವಕ್ಫ್‌ ಬೋರ್ಡ್‌ಗೆ ನೀಡಲಾಗುವ ಐದು ಎಕರೆ ಜಮೀನನ್ನು ಪಡೆಯಬೇಕೋ ಬೇಡವೋ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದೂರಜಾಕ್‌ ಖಾನ್‌ ತಿಳಿಸಿದ್ದಾರೆ.

ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ.9ರಂದು ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ ವಿವಾದಿತ 2.77 ಎಕರೆ ಭೂಮಿಯನ್ನು ರಾಮ ಲಲ್ಲಾಗೆ ವಹಿಸಿತ್ತು. ಸುನ್ನಿ ವಕ್ಫ್‌ ಬೋರ್ಡ್‌ಗೆ ಅಯೋಧ್ಯೆಯಲ್ಲೇ ಪ್ರತ್ಯೇಕ ಐದು ಎಕರೆ ಭೂಮಿಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.