ADVERTISEMENT

‘ಸನ್ನಿ ಲಿಯೋನ್’ ಹೆಸರಿನಲ್ಲಿ ಸರ್ಕಾರದಿಂದ ಮಾಸಿಕ ₹1000 ಪಡೆಯುತ್ತಿದ್ದ ವ್ಯಕ್ತಿ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2024, 7:20 IST
Last Updated 23 ಡಿಸೆಂಬರ್ 2024, 7:20 IST
<div class="paragraphs"><p>ಸನ್ನಿ ಲಿಯೋನ್</p></div>

ಸನ್ನಿ ಲಿಯೋನ್

   

ರಾಯಪುರ: ‘ಸನ್ನಿ ಲಿಯೋನ್’ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ತೆರೆಯುವ ಮೂಲಕ ವ್ಯಕ್ತಿಯೊಬ್ಬ ಛತ್ತೀಸಗಢ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ತಂದಿರುವ ‘ಮಹತಾರಿ ವಂದನಾ ಯೋಜನೆ’ಯ ಲಾಭ ಪಡೆದುಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ.

ಈ ಯೋಜನೆಯಡಿಯಲ್ಲಿ ವಿವಾಹಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಸರ್ಕಾರ ₹1 ಸಾವಿರ ಮೊತ್ತವನ್ನು ಜಮಾ ಮಾಡುತ್ತಿದೆ.

ADVERTISEMENT

ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೀರೇಂದ್ರ ಜೋಶಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ವಂಚನೆ ಬಗ್ಗೆ ತನಿಖೆ ಆರಂಭಿಸಿದೆ. ಛತ್ತೀಸಗಢದ ಬಸ್ತಾರ್ ಜಿಲ್ಲೆಯ ತಾಲೂರ್ ಗ್ರಾಮದಲ್ಲಿ ವಂಚನೆ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹ್ಯಾರಿಸ್‌ ಎಸ್. ಆದೇಶಿಸಿದ್ದಾರೆ.

ಈ ಸಂಗತಿಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಮಹತಾರಿ ವಂದನಾ ಯೋಜನೆಯಡಿ ಶೇ 50ರಷ್ಟು ಫಲಾನುಭವಿಗಳು ನಕಲಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೀಪಕ್ ಬೈಜ್ ಆರೋಪಿಸಿದ್ದು, ಈ ಆರೋಪವನ್ನು ಬಿಜೆಪಿ ಅಲ್ಲಗೆಳೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.