ADVERTISEMENT

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 7:58 IST
Last Updated 5 ಏಪ್ರಿಲ್ 2021, 7:58 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ನವದೆಹಲಿ: ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ, ಈ ಪ್ರಕರಣ ಕುರಿತು ಮಾ.21ರಂದು ಹೈಕೋರ್ಟ್‌ ನೀಡಿದ್ದ ಆದೇಶವನ್ನು ಅಮಾನತುಗೊಳಿಸಿ, ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

10 ವರ್ಷದ ಹಿಂದಿನ ಅಕ್ರಮ ಭೂ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ನಿರಾಕರಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಬದಿಗಿಟ್ಟು, ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.