ADVERTISEMENT

ದೌರ್ಜನ್ಯ ಕಾಯ್ದೆ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 1 ಮೇ 2019, 18:16 IST
Last Updated 1 ಮೇ 2019, 18:16 IST

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.

2018ರ ಮಾರ್ಚ್‌ 20ರಂದು ನೀಡಿದ ತೀರ್ಪಿನ ವಿರುದ್ಧ ಕೇಂದ್ರ ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಯು.ಯು. ಲಲಿತ್‌ ನಡೆಸಿದರು.

ದೌರ್ಜನ್ಯ, ಶೋಷಣೆ ಎದುರಿಸಿರುವ ಸಮುದಾಯಗಳಿಗೆ ಸಂಬಂಧಿಸಿದ ಮಹತ್ವದ ವಿಷಯ ಇದಾಗಿದೆ ಎಂದು ಪ್ರತಿಪಾದಿಸಿದ್ದ ಕೇಂದ್ರ ಸರ್ಕಾರ, ದೇಶದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯವನ್ನು ಅಂಕಿ–ಸಂಖ್ಯೆಗಳ ಸಮೇತ ನ್ಯಾಯಾಲಯಕ್ಕೆ ವಿವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.