ನವದೆಹಲಿ: ಮಹಾರಾಷ್ಟ್ರದ ಅಕೋಲಾದಲ್ಲಿ 2023ರಲ್ಲಿ ನಡೆದ ಕೋಮು ಗಲಭೆ ಮತ್ತು ಆಟೊ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
‘ಗಲಭೆಯಲ್ಲಿ ಆಟೊರಿಕ್ಷಾ ಚಾಲಕ ಮಹದೇವರಾವ್ ಗಾಯಕವಾಡ್ ಅವರನ್ನು ಮುಸ್ಲಿಂ ಎಂದು ಭಾವಿಸಿ ಹತ್ಯೆ ಮಾಡಲಾಗಿತ್ತು. ಇದನ್ನು ನಾನು ಕಣ್ಣಾರೆ ಕಂಡಿದ್ದೇನೆ, ನನ್ನ ಮೇಲೂ ಗಂಭೀರ ಹಲ್ಲೆ ಮಾಡಲಾಯಿತು’ ಎಂದು ಆರೋಪಿಸಿ ಮಹಮದ್ ಅಫ್ಜಲ್ ಮಹಮದ್ ಷರೀಫ್ ಎಂಬುವರು ದೂರು ದಾಖಲಿಸಿದ್ದರು.
ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು, ಮಹಮದ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸಿ, ತನಿಖೆಗೆ ಎಸ್‌ಐಟಿ ರಚಿಸುವಂತೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.