ನವದೆಹಲಿ: ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಾತಕಿ ಛೋಟಾ ರಾಜನ್‌ಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಬಾಂಬೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ, ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿತು.
‘ರಾಜನ್ 27 ವರ್ಷ ತಲೆಮರೆಸಿಕೊಂಡಿದ್ದ. ನಾಲ್ಕು ಪ್ರಕರಣಗಳಲ್ಲಿ ಅಪರಾಧಿಯಾಗಿದ್ದಾನೆ. ಇಂತಹ ವ್ಯಕ್ತಿಯ ಶಿಕ್ಷೆಯನ್ನು ಏಕೆ ಅಮಾನತುಗೊಳಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.