ADVERTISEMENT

ಎನ್‌ಡಿಎ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅನುಮತಿ

ಅಧಿಸೂಚನೆ ಹೊರಡಿಸಲು ಯುಪಿಎಸ್‌ಸಿಗೆ ಸುಪ್ರೀಂ ಕೋರ್ಟ್ ಸೂಚನೆ

ಪಿಟಿಐ
Published 18 ಆಗಸ್ಟ್ 2021, 14:26 IST
Last Updated 18 ಆಗಸ್ಟ್ 2021, 14:26 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸೆಪ್ಟೆಂಬರ್‌ 5 ರಂದು ನಡೆಯಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಮಹಿಳೆಯರೂ ಹಾಜರಾಗಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶ ನೀಡಿದೆ.

ನ್ಯಾಯಾಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಮತ್ತು ಹೃಷಿಕೇಶ್‌ ರಾಯ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಈ ಪರೀಕ್ಷೆಯ ಫಲಿತಾಂಶ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಈ ಆದೇಶದ ಉದ್ದೇಶವು ಜಾರಿಗೆ ಬರುವಂತಾಗಲು ಅಧಿಸೂಚನೆ ಹೊರಡಿಸಿ ಪ್ರಚಾರಪಡಿಸಬೇಕು ಎಂದು ಪೀಠವು ಕೇಂದ್ರ ಲೋಕಸೇವಾ ಆಯೋಗಕ್ಕೆ ಯುಪಿಎಸ್‌ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ADVERTISEMENT

ಎನ್‌ಡಿಎ ಮತ್ತು ನೌಕಾದಳ ಅಕಾಡೆಮಿ ಪರೀಕ್ಷೆಗಳಿಗೆ ಹಾಜರಾಗಲು ಮಹಿಳಾ ಅಭ್ಯರ್ಥಿಗಳಿಗೆ ಅನುಮತಿ ನೀಡದ ಕೇಂದ್ರದ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಸಹ ಶಿಕ್ಷಣವು ಏಕೆ ಸಮಸ್ಯೆಯಾಗಲಿದೆ ಎಂದು ಪ್ರಶ್ನಿಸಿರುವ ನ್ಯಾಯಾಲಯ, ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಇದು ಕೇವಲ ಲಿಂಗ ತತ್ವದ ಪ್ರಕರಣವಲ್ಲ. ಲಿಂಗತಾರತಮ್ಯವನ್ನು ಒಳಗೊಂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ಇದೇ ಎಂದಾದರೆ, ಎನ್‌ಡಿಎ ಪ್ರವೇಶಕ್ಕೆ ಏಕೆ ತಡೆಹಿಡಿಯಲಾಗುತ್ತಿದೆ ಎಂದಿರುವ ನ್ಯಾಯಾಲಯ, ಸರ್ಕಾರ ಪ್ರತಿ ಬಾರಿ ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಬಯಸಬಾರದು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.