
ಸುಪ್ರೀಂ ಕೋರ್ಟ್
ನವದೆಹಲಿ: ಇಸ್ಕಾನ್ ನಡೆಸುತ್ತಿರುವ ಶಾಲೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ಕೋರಿರುವ ಅರ್ಜಿದಾರರು ತಮ್ಮ ದೂರುಗಳನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಮಂಗಳವಾರ ತಿಳಿಸಿದೆ.
ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಗಳಿಗೆ ಅಂತಹ ದೂರುಗಳನ್ನು ನೀಡಿದರೆ, ಅದನ್ನು ಸಮಂಜಸವಾದ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ಹೇಳಿದೆ.
‘ಇಸ್ಕಾನ್ ನಡೆಸುತ್ತಿರುವ ಶಾಲೆಗಳಲ್ಲಿ ಗಂಭೀರ ಸ್ವರೂಪದ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಆದರೆ, ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೆ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ಪ್ರಕರಣಗಳ ತನಿಖೆ ನಡೆಸಬೇಕು’ ಎಂದು ಕೋರಿ ರಜನೀಶ್ ಕಪೂರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.