ADVERTISEMENT

ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್: ವಿಸ್ತೃತ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಸೂಚನೆ

ಸಿದ್ದಯ್ಯ ಹಿರೇಮಠ
Published 7 ಜನವರಿ 2020, 6:55 IST
Last Updated 7 ಜನವರಿ 2020, 6:55 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ನಾಯಕಡಿ.ಕೆ.‌ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆವಿಸ್ತೃತ ಅಫಿಡವಿಟ್ ಸಲ್ಲಿಸಲು ಸಮಾಜ‌ ಪರಿವರ್ತನ ಸಮುದಾಯಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರಸೂಚನೆ ನೀಡಿದೆ.

ಅರ್ಜಿದಾರರಾದ ಎಸ್.ಆರ್. ಹಿರೇಮಠ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಮೇಲಿನಂತೆ ಸೂಚನೆ ನೀಡಿತು.

ಈ ಬಾರಿ ಸಲ್ಲಿಸುವ ಅಫಿಡವಿಟ್ ಜೊತೆಗೆಲೋಕಾಯುಕ್ತಕ್ಕೆದೂರಿನ ಪ್ರತಿಯನ್ನೂ ನೀಡಬೇಕು.ಹೈಕೋರ್ಟ್‌ ವಿಚಾರಣೆಯಲ್ಲಿನೀವು ಏಕೆಭಾಗಿಯಾಗಲಿಲ್ಲ. ಪ್ರಕರಣದಲ್ಲಿ ನಿಮ್ಮ ಪಾತ್ರದ ಬಗ್ಗೆ ವಿವರಿಸಿ ಅಫಿಡವಿಟ್ ಸಲ್ಲಿಸಬೇಕು ಎಂದು ನ್ಯಾಯಪೀಠದ ಸೂಚಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.