ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಪಟ್ಟಿ ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್‌ಮಾಲ್ಯಾ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, ಚುನಾವಣಾ ಆಯೋಗ ಸಲ್ಲಿಸಿರುವ ವರದಿಗೆ ಸಂಬಂಧಿಸಿದಂತೆ ಆರ್‌ಜೆಡಿ, ಎಐಎಂಐಎಂ ಮತ್ತು ಇತರ ಅರ್ಜಿದಾರರು ಸಲ್ಲಿಸಿರುವ ಪ್ರತಿಕ್ರಿಯೆಗಳನ್ನು ಪರಿಗಣಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.