ADVERTISEMENT

ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸುವ ಯತ್ನ: ನಿಶಿಕಾಂತ್ ಬಗ್ಗೆ ಜೈರಾಂ ರಮೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಏಪ್ರಿಲ್ 2025, 6:35 IST
Last Updated 20 ಏಪ್ರಿಲ್ 2025, 6:35 IST
ಜೈರಾಂ ರಮೇಶ್
ಜೈರಾಂ ರಮೇಶ್   

ನವದೆಹಲಿ: ಸುಪ್ರೀಂ ಕೋರ್ಟ್ ಕುರಿತಂತೆ ಭಾರತೀಯ ಜನತಾ ಪಕ್ಷದ ನಾಯಕ ನಿಶಿಕಾಂತ್ ದುಬೆ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಟೀಕಿಸಿದ್ದಾರೆ.

ಸರ್ಕಾರವು ಸುಪ್ರೀಂ ಕೋರ್ಟ್ ಅನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಮತ್ತು ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ಬಿಜೆಪಿಗರು ಸುಪ್ರೀಂ ಕೋರ್ಟ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾನೂನು ರಚಿಸಿದಾಗ, ನೀವು ಸಂವಿಧಾನದ ಮೂಲ ರಚನೆಯ ವಿರುದ್ಧ ಹೋಗಬಾರದು ಮತ್ತು ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದ್ದರೆ, ನಾವು ಅದನ್ನು ಸ್ವೀಕರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳುತ್ತಿದ್ದು, ಸಚಿವರು, ಬಿಜೆಪಿ ಸಂಸದರು ಸುಪ್ರೀಂ ಕೋರ್ಟ್ ವಿರುದ್ಧವೇ ಮಾತನಾಡುತ್ತಿದ್ದಾರೆ... ಚುನಾವಣಾ ಬಾಂಡ್‌ಗಳಂತಹ ಅನೇಕ ವಿಷಯಗಳಲ್ಲಿ, ಸರ್ಕಾರವು ಮಾಡಿರುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಉದ್ದೇಶಪೂರ್ವಕವಾಗಿ ನ್ಯಾಯಾಲಯವನ್ನುಗುರಿಯಾಗಿಸಲಾಗುತ್ತಿದೆ’ಎಂದು ಜೈರಾಂ ರಮೇಶ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ.

ADVERTISEMENT

ದೇಶದಲ್ಲಿ ನಾಗರಿಕ ಸಂಘರ್ಷಕ್ಕ ಸುಪ್ರೀಂ ಕೋರ್ಟ್ ಕಾರಣವಾಗಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ನಿಶಿಕಾಂತ್ ದುಬೆ ಶನಿವಾರ ಆರೋಪಿಸಿದ್ದರು. ಅಲ್ಲದೆ, ಸುಪ್ರೀಂ ಕೋರ್ಟ್ ಕಾನೂನುಗಳನ್ನು ರಚಿಸುವುದರೆ ಸಂಸತ್ತನ್ನು ಮುಚ್ಚಬೇಕು ಎಂದೂ ಹೇಳಿದ್ದರು.

ಇತ್ತೀಚೆಗೆ ಜಾರಿಗೆ ತಂದ ವಕ್ತ್ ತಿದ್ದುಪಡ) ಕಾಯ್ದೆ, 2025ರ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ಈ ಹೇಳಿಕೆಗಳು ಬಂದಿವೆ. ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ವಕ್ಫ್ ಕಾಯ್ದೆಯ ಕೆಲವು ನಿಬಂಧನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆಗಳನ್ನು ಎತ್ತಿತ್ತು. ಮೇ 5ರಂದು ಮುಂದಿನ ವಿಚಾರಣೆಯವರೆಗೆ ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವು ಅಂಶಗಳನ್ನು ಜಾರಿಗೊಳಿಸುವುದಿಲ್ಲ ಎಂದು ಸರ್ಕಾರವು ಉನ್ನತ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.