
ನವದೆಹಲಿ: ಬಾಕಿ ಉಳಿದಿರುವ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
‘ಸಂಗ್ರಹಿಸಿದ ಸಾಕ್ಷ್ಯಗಳು ಶಿಕ್ಷೆಗೆ ಪೂರಕವಾಗಿವೆಯೇ ಎಂಬ ತನಿಖಾಧಿಕಾರಿಯ ನಿರ್ಣಯದ ಆಧಾರದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸುವ ನಿರ್ಧಾರ ಕೈಗೊಳ್ಳಬೇಕು’ ಎಂದು ನೋಂಗ್ನಿಕಾಪಂ ಕೋಟೀಶ್ವರ ಸಿಂಗ್ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠ ತಿಳಿಸಿದೆ.
‘ನ್ಯಾಯಾಂಗ ವ್ಯವಸ್ಥೆಯ ದಕ್ಷತೆ ಮತ್ತು ಸಮಗ್ರತೆ ಕಾಪಾಡಿಕೊಳ್ಳುವುದಕ್ಕಾಗಿ, ಪೊಲೀಸರು ಆರೋಪಪಟ್ಟಿ ಸಲ್ಲಿಸುವಾಗ ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಬಲವಾದ ಶಂಕೆ ಇರುವ ಪ್ರಕರಣಗಳನ್ನು ಮಾತ್ರ ಔಪಚಾರಿಕ ವಿಚಾರಣೆಯ ಹಂತದವರೆಗೆ ಮುಂದುವರಿಸಬೇಕು’ ಎಂದು ಪೀಠ ಹೇಳಿದೆ.
ಬಲವಾದ ಶಂಕೆ ವ್ಯಕ್ತವಾಗದ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದರಿಂದ ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿಯುಂಟಾಗುತ್ತದೆ. ಅಲ್ಲದೇ, ಖುಲಾಸೆ ಸಾಧ್ಯತೆಯಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ಸಮಯ ವ್ಯರ್ಥವಾಗಿಸಲು ಕಾರಣವಾಗುತ್ತದೆ’ ಎಂದು ಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.