ನವದೆಹಲಿ: ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್‌ನಿಂದ ಈ ವರ್ಷದ ಮೇ ತಿಂಗಳಿನಲ್ಲಿ ನಿವೃತ್ತರಾದ ನ್ಯಾಯಮೂರ್ತಿಯೊಬ್ಬರು ನೀಡಿದ ತೀರ್ಪುಗಳನ್ನು ಅರ್ಥೈಸಿಕೊಳ್ಳುವಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಹೇಗೆ ತೊಂದರೆಗಳನ್ನು ಎದುರಿಸಿದರು ಎಂಬುದನ್ನು ಸುಪ್ರೀಂ ಕೋರ್ಟ್‌ನ ಸಿಜೆಐ ನೇತೃತ್ವದ ಪೀಠ ಶುಕ್ರವಾರ ನೆನಪಿಸಿಕೊಂಡಿತು.
ಅದೃಷ್ಟವಶಾತ್, ಹೈಕೋರ್ಟ್‌ನ ಆ ನ್ಯಾಯಮೂರ್ತಿ ತಮ್ಮ ಹುದ್ದೆ ತ್ಯಜಿಸಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ನೇತೃತ್ವದ ಪೀಠ ಹೇಳಿತು.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ 2024ರ ಅಕ್ಟೋಬರ್ 1ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಪೀಠ ಈ ಕುರಿತು ಪ್ರಸ್ತಾಪಿಸಿತು.
ಕೊಲೆ ಪ್ರಕರಣಲ್ಲಿ ಮೇಲ್ಮನವಿದಾರರನ್ನು ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿಗಳನ್ನು ಹೊಸದಾಗಿ ಪರಿಗಣಿಸುವಂತೆ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.