ನವದೆಹಲಿ: ಹೈಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳು ಮರಣದಂಡನೆ ವಿಧಿಸುವ ಮುನ್ನ ವಸ್ತುಸ್ಥಿತಿಯ ಸೂಕ್ಷ್ಮವನ್ನು ಸಾವಧಾನವಾಗಿ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2014ರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ನೈನಿತಾಲ್ ವಿಚಾರಣಾ ನ್ಯಾಯಾಲಯವು ವಿಧಿಸಿದ್ದ ಮರಣದಂಡನೆಯನ್ನು ರದ್ದುಪಡಿಸಿದೆ.
‘ಪ್ರಾಸಿಕ್ಯೂಷನ್ ದೋಷಾರೋಪಣೆ ಮಾಡಲು ಸಾಧ್ಯವಾಗದೇ ಇದ್ದಾಗ ಹಾಗೂ ನ್ಯಾಯಸಮ್ಮತವೂ ಸಮರ್ಥನೀಯವೂ ಆದ ಸಾಕ್ಷ್ಯಗಳನ್ನು ಒದಗಿಸಿದಾಗ ‘ಅಪರೂಪದಲ್ಲಿ ಅಪರೂಪ ಎನ್ನುವಂತಹ ಪ್ರಕರಣ’ಗಳಲ್ಲಿ ಮಾತ್ರ ಮರಣದಂಡನೆ ವಿಧಿಸಬಹುದು ಎಂದು ನ್ಯಾಯಮೂರ್ತಿ ವಿಕ್ರಮ್‌ನಾಥ್ ನೇತೃತ್ವದ ಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.