ADVERTISEMENT

ಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2022, 7:05 IST
Last Updated 10 ಫೆಬ್ರುವರಿ 2022, 7:05 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನಿಂದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ದೇಶದ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಕರ್ನಾಟಕ ಹೈಕೋರ್ಟ್‌‌ನ ಪೂರ್ಣ ಪೀಠ ಇಂದು ವಿಚಾರಣೆ ಕೈಗೆತ್ತಿಕೊಳ್ಳುತ್ತಿದೆ. ಈ ಹಂತದಲ್ಲಿ ಮಧ್ಯ ಪ್ರವೇಶ ಯಾಕೆ ಮಾಡಬೇಕು ಎಂದು ಪ್ರಶ್ನಿಸಿರುವಸುಪ್ರೀಂ ಕೋರ್ಟ್, ಯಾವುದೇ ನಿರ್ದಿಷ್ಟ ದಿನಾಂಕವನ್ನು ಸೂಚಿಸಲು ನಿರಾಕರಿಸಿದೆ.

ಹೈಕೋರ್ಟ್‌ನ ಪೂರ್ಣ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ, ಆದೇಶದ ಬಳಿಕವೂ ಅಗತ್ಯ ಬಿದ್ದರೆ ಮುಂದೆ ನೋಡೋಣ ಎಂದು ಹೇಳಿದೆ.

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಹಿಜಾಬ್ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಹಾಗೂ ತುರ್ತು ವಿಚಾರಣೆಗೆ ಆಗ್ರಹಿಸಿದ್ದರು. ಸಿಬಲ್ ತಮ್ಮ ಅರ್ಜಿಯಲ್ಲಿ ಶಾಲೆ, ಕಾಲೇಜುಗಳು ಮುಚ್ಚಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.