ನವದೆಹಲಿ: ವಿದೇಶಗಳಲ್ಲಿರುವ ಎಲ್ಲಾ ಭಾರತೀಯರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.
ಕೊರೊನಾ ಸೋಂಕು ತಗುಲಿ ವಿಶ್ವದ 183ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿರುವ ಪ್ರಜೆಗಳು ಅನಾರೋಗ್ಯ ಪೀಡಿತರಾಗಿದ್ದಾರೆ. ಈ ರಾಷ್ಟ್ರಗಳಲ್ಲಿ ಅನೇಕ ಭಾರತೀಯರು ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದೇಶಗಳಲ್ಲಿರುವ ಭಾರತೀಯರನ್ನುಕರೆಸಿಕೊಳ್ಳುವ ಸಲುವಾಗಿ ಹಲವು ಮಂದಿ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಇಲ್ಲವೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ಈ ವಿಷಯ ಕುರಿತ ಅರ್ಜಿ ವಿಚಾರಣೆಯನ್ನುಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿರುವುದೆ. ಇದರಿಂದಾಗಿಕೊರೊನಾ ಸೋಂಕಿತರ ಕುಟುಂಬಗಳಲ್ಲಿ ಆತಂಕ ಎದುರಾಗಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗಲಾರದೆ, ಪರಿತಪಿಸುವಂತಾಗಿದೆ.
ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿರುವುದರಿಂದ ಯಾರೂ ಭಾರತಕ್ಕೆ ಬರುವುದಾಗಲೀ ಇಲ್ಲಿಂದ ಅವರನ್ನು ತಲುಪುವುದಾಗಲೀ ಸಾಧ್ಯವಾಗುತ್ತಿಲ್ಲ. ಇದರಿಂದ ವಿದೇಶಗಳಲ್ಲಿರುವವರು ಅಲ್ಲಿಯೇಅನಿವಾರ್ಯವಾಗಿ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ವಿದೇಶಗಳಲ್ಲಿರುವ ಸಂಬಂಧಿಕರಲ್ಲಿ ಸಹಜವಾಗಿಆತಂಕಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.