ADVERTISEMENT

ಹಿಂಸಾಚಾರ: ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಲ್ಲಿಸಿದ ಅರ್ಜಿ ವಿಚಾರಣೆ ಅ.22ಕ್ಕೆ

ಚುನಾಣೋತ್ತರ ಹಿಂಸಾಚಾರ

ಪಿಟಿಐ
Published 4 ಅಕ್ಟೋಬರ್ 2021, 10:02 IST
Last Updated 4 ಅಕ್ಟೋಬರ್ 2021, 10:02 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ‘ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ನಡೆಸುತ್ತಿರುವ ತನಿಖೆ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಕಾನೂನಿನ ಪ್ರಕಾರ ತನ್ನ ಅನುಮತಿ ಪಡೆಯದೆಯೇ ಸಿಬಿಐ ಚುನಾವಣೋತ್ತರ ಹಿಂಸಾಚಾರ ಪ್ರಕರಣದ ತನಿಖೆ ಆರಂಭಿಸಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್ ನಾಗೇಶ್ವರರಾವ್ ನೇತೃತ್ವದ ನ್ಯಾಯಪೀಠ, ‘ಇನ್ನು ಯಾವ ಕಾರಣಕ್ಕೂ ಈ ಪ್ರಕರಣದ ವಿಚಾರಣೆಯನ್ನು ಮುಂದೂಡುವುದಿಲ್ಲ‘ ಎಂದು ಸ್ಪಷ್ಟಪಡಿಸಿತು. ನಂತರ, ದಸರಾ ರಜಾದಿನಗಳ ನಂತರ ಈ ಅರ್ಜಿ ಆಲಿಸುವುದಾಗಿ ಹೇಳಿತು.

ADVERTISEMENT

‘ನ್ಯಾಯಾಲಯದ ವರದಿಯ ಪ್ರಕಾರ ಸೆಪ್ಟೆಂಬರ್ 20, 2021ಕ್ಕೂ ಮೊದಲು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಕೇಂದ್ರ ಸರ್ಕಾರದ ಪರವಾಗಿ ಯಾರೂ ಹಾಜರಾಗಿಲ್ಲ. ಈ ವಿಷಯವನ್ನು ಅ.22 ರಂದು ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಿ,ಅಲ್ಲಿಯವರೆಗೆ ಪ್ರತಿವಾದಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ‘ ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೂ ಒಳಗೊಂಡಿರುವ ಪೀಠ ಹೇಳಿದೆ.

ವಕೀಲ ಕಪಿಲ್ ಸಿಬಲ್ ಅವರು ಪಶ್ಚಿಮ ಬಂಗಾಳದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.