ADVERTISEMENT

ಉಗ್ರರಿಗೆ ಆರ್ಥಿಕ ನೆರವು: ಶಬೀರ್ ಶಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಪಿಟಿಐ
Published 4 ಸೆಪ್ಟೆಂಬರ್ 2025, 7:08 IST
Last Updated 4 ಸೆಪ್ಟೆಂಬರ್ 2025, 7:08 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್‌ ಅಹಮ್ಮದ್‌ ಶಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ಶಬೀರ್‌ ಅಹಮ್ಮದ್‌ ಶಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೇ ವರ್ಷ ಜೂನ್‌ 12ರಂದು ದೆಹಲಿ ಹೈಕೋರ್ಟ್‌ ಕೂಡ ವಜಾ ಮಾಡಿತ್ತು.

ADVERTISEMENT

ನ್ಯಾಯಮೂರ್ತಿಗಳಾದ ವಿಕ್ರಂ ನಾಥ್‌ ಹಾಗೂ ಸಂದೀಪ್‌ ಮೇಹ್ತಾ ಅವರಿದ್ದ ಪೀಠ ಶಬೀರ್‌ ಅಹಮ್ಮದ್‌ಗೆ ಜಾಮೀನು ನೀಡಲು ನಿರಾಕರಿಸಿದರು.

ಶಬೀರ್‌ ಅಹಮ್ಮದ್‌ ಪರ ವಕೀಲರು, ಅರ್ಜಿದಾರರು ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು. 

ದೆಹಲಿ ಹೈಕೋರ್ಟ್‌ ನೀಡಿದ ಆದೇಶವನ್ನು ಪ್ರಶ್ನಿಸಿ ಶಬೀರ್‌ ಅಹಮ್ಮದ್‌ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಶಬೀರ್‌ ಅಹಮ್ಮದ್‌ ಸಲ್ಲಿಸಿರುವ ಅರ್ಜಿಯ ಕುರಿತು ವಿವರಣೆ ನೀಡುವಂತೆ ಎನ್ಐಎಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಇದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎರಡು ವಾರ ಮುಂದೂಡಿದೆ.

2019ರ ಜೂನ್‌ 4ರಂದು ಎನ್‌ಐಎ ಶಾ ಅವರನ್ನು ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.