ADVERTISEMENT

ಹಿರಿಯ ನಾಗರಿಕರಿಗೆ ಪಿಂಚಣಿ, ಅಗತ್ಯ ವಸ್ತು ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಏಜೆನ್ಸೀಸ್
Published 4 ಆಗಸ್ಟ್ 2020, 6:09 IST
Last Updated 4 ಆಗಸ್ಟ್ 2020, 6:09 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ:ಕೊರೊನಾ ವೈರಸ್‌ ಸಂಕಷ್ಟದ ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವು ನೀಡುವುದನ್ನು ಮುಂದುವರೆಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ‌ ಹೇಳಿದೆ.

ಒಂಟಿಯಾಗಿ ವಾಸಿಸುತ್ತಿರುವ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕಾಲದಲ್ಲಿ ಪಿಂಚಣಿ, ಆಹಾರ, ಸ್ಯಾನಿಟೈಸರ್‌, ಮಾಸ್ಕ್‌ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುವುದನ್ನು ಮುಂದುವರೆಸಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಕೊರೊನಾ ವೈರಸ್‌ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಏಕಾಂಗಿಯಾಗಿ ವಾಸಿಸುತ್ತಿರುವವರಿಗೆ ಸರ್ಕಾರ ನೆರವು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.