ADVERTISEMENT

ಜನ ನಾಯಗನ್: ಮದ್ರಾಸ್‌ ಹೈಕೋರ್ಟ್‌ಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ

ಪಿಟಿಐ
Published 15 ಜನವರಿ 2026, 15:55 IST
Last Updated 15 ಜನವರಿ 2026, 15:55 IST
ಜನ ನಾಯಗನ್ ಚಿತ್ರದ ಪೋಸ್ಟರ್‌
ಜನ ನಾಯಗನ್ ಚಿತ್ರದ ಪೋಸ್ಟರ್‌   

ನವದೆಹಲಿ: ನಟ ವಿಜಯ್‌ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್‌ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್‌, ಮದ್ರಾಸ್‌ ಹೈಕೋರ್ಟ್‌ಗೇ ಮರಳುವಂತೆ ಚಿತ್ರದ ನಿರ್ಮಾಪಕರಿಗೆ ಸೂಚಿಸಿದೆ. ಇದರಿಂದ ಚಿತ್ರದ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದೆ.

ಮದ್ರಾಸ್‌ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆಯು ತ್ವರಿತಗತಿಯಲ್ಲಿ ನಡೆದಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ದೀಪಂಕರ್‌ ದತ್ತ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ನಿರ್ಮಾಪಕರು ತಮ್ಮ ಸಮಸ್ಯೆಗೆ ಪರಿಹಾರ ಪಡೆಯಲು ಜನವರಿ 20ರಂದು ಹೈಕೋರ್ಟ್‌ನ ವಿಭಾಗೀಯ ಪೀಠದ ಎದುರು ಹೋಗುವಂತೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT