ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರ ಚಿಕಿತ್ಸೆಗೆ ಆದ್ಯತೆ: ಸುಪ್ರೀಂ ನಿರ್ದೇಶನ

ಕೋವಿಡ್‌-19 ಸಾಂಕ್ರಾಮಿಕದ ನಡುವೆ ಕಳೆದ ವರ್ಷ ನೀಡಿದ ಆದೇಶ ಪರಿಷ್ಕರಣೆ

ಪಿಟಿಐ
Published 4 ಮಾರ್ಚ್ 2021, 8:14 IST
Last Updated 4 ಮಾರ್ಚ್ 2021, 8:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಖಾಸಗಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆ ನೀಡುವಲ್ಲಿ ಹಿರಿಯ ನಾಗರಿಕರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಎಸ್. ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠ ಕಳೆದ ವರ್ಷದ ಆಗಸ್ಟ್‌ 4ರಂದು, ‘ಕೊರೊನಾ ಸೋಂಕಿಗೆ ಒಳಗಾಗುವ ಅಪಾಯ ಇರುವ ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆಗೆ ಅವಕಾಶ ನೀಡಬೇಕೆಂದು‘ ನಿರ್ದೇಶನ ನೀಡಿತ್ತು. ಈಗ ಆ ಆದೇಶವನ್ನು ಪರಿಷ್ಕರಿಸಿ, ಸರ್ಕಾರಿ ಆಸ್ಪತ್ರೆಗಳ ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲೂ ಹಿರಿಯ ನಾಗರಿಕರಿಗೆ ಚಿಕಿತ್ಸೆ ಆದ್ಯತೆ ನೀಡಬೇಕೆಂದು ಆದೇಶಿಸಿದೆ.

ಹಿರಿಯ ವಕೀಲ ಅಶ್ವನಿ ಕುಮಾರ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಆ ಅರ್ಜಿಯಲ್ಲಿ ‘ಒಡಿಶಾ ಮತ್ತು ಪಂಜಾಬ್‌ ಹೊರತುಪಡಿಸಿ ಬೇರೆ ಯಾವ ರಾಜ್ಯಗಳೂ, ಈ ಹಿಂದೆ ಕೋರ್ಟ್‌ ನೀಡಿದ ನಿರ್ದೇಶನಕ್ಕೆ ಅನುಗುಣವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿಲ್ಲ‘ ಎಂದು ಉಲ್ಲೇಖಿಸಿದರು.

ADVERTISEMENT

ಹಿರಿಯ ನಾಗರಿಕರಿಗೆ ನೆಮ್ಮದಿ ನೀಡುವಂತಹ ಅಶ್ವಿನ್ ಕುಮಾರ್ ನೀಡಿದ ಹೊಸ ಸಲಹೆಗಳಿಗೆ ಸ್ಪಂದಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಮೂರು ವಾರಗಳ ಕಾಲಾವಕಾಶ ನೀಡಿತು.

ವಿಚಾರಣೆ ವೇಳೆ, ಕುಮಾರ್ ಅವರು, ‘ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಎಲ್ಲ ರಾಜ್ಯಗಳು ಹೊಸದಾದ ನಿಗದಿತ ಕಾರ್ಯವಿಧಾನ (ಎಸ್‌ಒಪಿ) ಜಾರಿಗೊಳಿಸುವ ಅವಶ್ಯಕತೆ ಇದೆ‘ ಎಂದು ಹೇಳಿದರು. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ನ್ಯಾಯಾಲಯ ನಿರ್ದೇಶನಗಳನ್ನು ನೀಡಬಹುದು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.