ADVERTISEMENT

ಮೋದಿ ವಿರುದ್ಧ ಕ್ರಮಕ್ಕೆ ‘ಸುಪ್ರೀಂ’ ನಕಾರ

ಪಿಟಿಐ
Published 8 ಮೇ 2019, 19:28 IST
Last Updated 8 ಮೇ 2019, 19:28 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ವಿರುದ್ಧನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸಂಸದೆ ಸುಶ್ಮಿತಾ ದೇವ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ.

ಆದರೆ, ಮೋದಿ ಮತ್ತು ಶಾ ವಿರುದ್ಧ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಆರೋಪಗಳ ಬಗ್ಗೆ ಚುನಾವಣಾ ಆಯೋಗವು ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ಹೊಸ ದೂರು ಸಲ್ಲಿಸಲು ಅವಕಾಶ ಇದೆ ಎಂದು ಸುಶ್ಮಿತಾ ಅವರಿಗೆ ನ್ಯಾಯಾಲಯ ತಿಳಿಸಿದೆ.

ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳಲ್ಲಿ ಆಯೋಗವು ನಿರ್ಧಾರ ಕೈಗೊಂಡಿದೆ. ಇದು ಸರಿಯೇ ತಪ್ಪೇ ಎಂಬುದು ಬೇರೆ ವಿಚಾರ. ಹಾಗಾಗಿ ಹೊಸ ದೂರು ಸಲ್ಲಿಸುವ ಸಾಧ್ಯತೆ ಮುಕ್ತವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ಹೇಳಿತು.ಮೋದಿ ಮತ್ತು ಶಾ ವಿರುದ್ಧದ ದೂರುಗಳ ಬಗ್ಗೆ ಆಯೋಗವು ನಿರ್ಧಾರ ಕೈಗೊಳ್ಳದಿರುವುದನ್ನು ಪ್ರಶ್ನಿಸಿ ಸುಶ್ಮಿತಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.