ADVERTISEMENT

ಬಾಬ್ರಿ ಮಸೀದಿ ನೆಲಸಮ ವಿಚಾರಣೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್‌

ಆಶಿಶ್ ತ್ರಿಪಾಠಿ
Published 22 ಆಗಸ್ಟ್ 2020, 13:10 IST
Last Updated 22 ಆಗಸ್ಟ್ 2020, 13:10 IST
   

ನವದೆಹಲಿ: ಬಿಜೆಪಿ ನಾಯಕರಾದ ಎಲ್‌.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಮತ್ತು ಇತರರ ವಿರುದ್ಧ ನಡೆಯುತ್ತಿರುವ 1992ರ ಬಾಬ್ರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲು ಲಖನೌ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್ 30ರ ಗಡುವು ನೀಡಿದೆ.

ನ್ಯಾಯಮೂರ್ತಿಗಳಾದ ಆರ್‌.ಎಫ್.ನಾರಿಮನ್, ನವೀನ್ ಸಿನ್ಹಾ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠವು ತೀರ್ಪು ನೀಡಲು ಇನ್ನೂ ಒಂದು ತಿಂಗಳ ಅವಧಿ ವಿಸ್ತರಿಸಲು ಅವಕಾಶ ನೀಡಿದೆ.ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರ ವಿನಂತಿಯ ಮೇರೆಗೆ ಆಗಸ್ಟ್ 19ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

'ಯಾದವ್ ಅವರ ವರದಿಗಳನ್ನು ಪರಿಶೀಲಿಸಿದೆವು. ವಿಚಾರಣೆಯು ಅಂತಿಮ ಹಂತದಲ್ಲಿದೆ. ತೀರ್ಪು ನೀಡಲು ಸೆಪ್ಟೆಂಬರ್ 30ರವರೆಗೆ ಸಮಯಾವಕಾಶ ನೀಡಲು ಅನುಮತಿ ನೀಡುತ್ತಿದ್ದೇವೆ' ಎಂದು ನ್ಯಾಯಪೀಠವು ಹೇಳಿದೆ.

ADVERTISEMENT

ಈ ಮೊದಲಿನ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ಆಗಸ್ಟ್‌ 30ರ ಒಳಗೆ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ನೀಡಬೇಕು ಎಂದು ಸೂಚಿಸಿತ್ತು. ವಿಡಿಯೊ ಕಾನ್ಫರೆನ್ಸ್‌ ಸಾಧ್ಯತೆಗಳನ್ನು ಬಳಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿ. ಈ ಗಡುವನ್ನು ಮೀರಬೇಡಿ ಎಂದು ಹೇಳಿತ್ತು.

ವಿಶೇಷ ನ್ಯಾಯಾಧೀಶರ ಸೇವಾವಧಿಯನ್ನು ಈ ಹಿಂದೆ ವಿಸ್ತರಿಸಿದ್ದ ಸುಪ್ರೀಂ ಕೋರ್ಟ್‌ ಏಪ್ರಿಲ್ 2020ರ ಒಳಗೆ ತೀರ್ಪು ನೀಡಬೇಕು ಎಂದು ಹೇಳಿತ್ತು. ನ್ಯಾಯಾಧೀಶಯ ವಿನಂತಿಯ ಮೇರೆಗೆ ಗಡುವನ್ನು ಆಗಸ್ಟ್‌ 31ಕ್ಕೆ ಈ ಹಿಂದೆ ವಿಸ್ತರಿಸಲಾಗಿತ್ತು. ಇದೀಗ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.