ADVERTISEMENT

ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 14:27 IST
Last Updated 4 ಫೆಬ್ರುವರಿ 2023, 14:27 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಶನಿವಾರ ಅನುಮತಿ ನೀಡಿದೆ.

ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್, ಪಟ್ನಾ ಹೈಕೋರ್ಟ್‌ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ, ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಡಿ. 13 ರಂದು ಕೊಲಿಜಿಯಂ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿತ್ತು.

ADVERTISEMENT

ನ್ಯಾಯಮೂರ್ತಿಗಳು ಸೋಮವಾರ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ. ಐವರು ನೂತನ ನ್ಯಾಯಮೂರ್ತಿಗಳ ನೇಮಕದೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 32 ತಲುಪಲಿದೆ. ಇನ್ನೂ ಇಬ್ಬರು ನ್ಯಾಯಮೂರ್ತಿಗಳ ನೇಮಕಾತಿಗೆ ಅವಕಾಶ ಇದೆ.

ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 27 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.