ADVERTISEMENT

ಕರ್ನಾಟಕದ ನ್ಯಾ. ಬಿ.ವಿ. ನಾಗರತ್ನ ಸೇರಿ ಸುಪ್ರೀಂಗೆ 9 ನ್ಯಾಯಮೂರ್ತಿಗಳ ನೇಮಕ

ಪಿಟಿಐ
Published 26 ಆಗಸ್ಟ್ 2021, 7:38 IST
Last Updated 26 ಆಗಸ್ಟ್ 2021, 7:38 IST
ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಚಿತ್ರ ಕೃ‍ಪೆ: ಕರ್ನಾಟಕ ಜುಡಿಶಿಯರಿ ವೆಬ್‌ಸೈಟ್‌
ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಚಿತ್ರ ಕೃ‍ಪೆ: ಕರ್ನಾಟಕ ಜುಡಿಶಿಯರಿ ವೆಬ್‌ಸೈಟ್‌   

ನವದೆಹಲಿ: ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನು ಗುರುವಾರ ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಮೂಲಗಳು ಹೇಳಿವೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಅವರನ್ನೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.

ADVERTISEMENT

ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್, ಜಿತೇಂದ್ರ ಕುಮಾರ್ ಮಹೇಶ್ವರಿ, ಹಿಮಾ ಕೊಹ್ಲಿ ಕೂಡ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಸೇವಾ ಹಿರಿತನದ ಮೇಲೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿಗೆ ಸೆಪ್ಟೆಂಬರ್ 2027ಕ್ಕೆ ಭಾರತದ ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯಾಗುವ ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.