ಸುಪ್ರೀಂ ಕೋರ್ಟ್
ನವದೆಹಲಿ: ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಲಿ ಖಾನ್ ಮಹಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಮಧ್ಯಂತರ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಅಲಿ ಖಾನ್ ಮಹಮೂದಾಬಾದ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ತನಿಖೆಯ ವಿಷಯವಾದ ಎರಡೂ ಪೋಸ್ಟ್‌ಗಳಿಗೆ ಸಂಬಂಧಿಸಿ ಯಾವುದೇ ಲೇಖನವನ್ನು ಬರೆಯಬಾರದು ಅಥವಾ ಭಾಷಣಗಳನ್ನು ಮಾಡಬಾರದು ಎಂದು ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಅಲಿ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.
ಪ್ರಕರಣ ಸಂಬಂಧ ಅಲಿ ಅವರನ್ನು ಭಾನುವಾರ ಬಂಧಿಸಲಾಗಿದೆ. ಅಲಿ ಅವರ ಹೇಳಿಕೆಯನ್ನು ಪ್ರಶ್ನಿಸಿ ಹರಿಯಾಣ ರಾಜ್ಯ ಮಹಿಳಾ ಆಯೋಗ ಇತ್ತೀಚೆಗೆ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಆಯೋಗವು ತಮ್ಮ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಂಡಿದೆ ಎಂದು ಅಲಿ ಅವರು ಸಮರ್ಥಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.