ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವ್ಯಾಪ್ತಿಯಲ್ಲಿ ಹಸಿರು ಪಟಾಕಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತಂತೆ ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರು ಇದ್ದ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರರ ವಾದ ಆಲಿಸಿತು.
ದೀಪಾವಳಿ, ಗುರುಪರ್ವ ಮತ್ತು ಕ್ರಿಸ್‌ಮಸ್ ಹಬ್ಬಗಳ ವೇಳೆ ದೆಹಲಿಯಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಸಮಯದ ನಿರ್ಬಂಧ ಇಲ್ಲದೇ ಅನುಮತಿ ನೀಡಬೇಕು ಎಂದು ಸರ್ಕಾರಗಳ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದರು.
ಹೆಚ್ಚುತ್ತಿರುವ ಪರಿಸರ ಮಾಲಿನ್ಯದ ಕಾರಣಕ್ಕಾಗಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.