ADVERTISEMENT

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಅ. 27ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ಪಿಟಿಐ
Published 23 ಅಕ್ಟೋಬರ್ 2025, 14:20 IST
Last Updated 23 ಅಕ್ಟೋಬರ್ 2025, 14:20 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್‌ ಕಿಶೋರ್‌ ಅವರನ್ನು ನ್ಯಾಯಾಂಗ ನಿಂದನೆಗೆ ಗುರಿಪಡಿಸುವ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇದೇ 27ರಂದು ನಡೆಸಲಿದೆ.

ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುವ ಪ್ರಕರಣಗಳ ವೇಳಾಪಟ್ಟಿ ಪ್ರಕಾರ, ಈ ಕುರಿತು ಸುಪ್ರೀಂ ಕೋರ್ಟ್‌ನ ವಕೀಲ ಸಂಘ (ಎಸ್‌ಸಿಬಿಎ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೇ 27ರಂದು ನಡೆಸಲು ದಿನಾಂಕ ನಿಗದಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.