ADVERTISEMENT

ಕರೂರು ಕಾಲ್ತುಳಿತ: ಅ.10ಕ್ಕೆ ಸುಪ್ರೀಂ ವಿಚಾರಣೆ

ಪಿಟಿಐ
Published 7 ಅಕ್ಟೋಬರ್ 2025, 15:28 IST
Last Updated 7 ಅಕ್ಟೋಬರ್ 2025, 15:28 IST
<div class="paragraphs"><p>ನ್ಯಾಯಾಲಯ</p></div>

ನ್ಯಾಯಾಲಯ

   

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಅಕ್ಟೋಬರ್‌ 10ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿಸಿದೆ. 

ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ರ‍್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 41 ಮಂದಿ ಮೃತಪಟ್ಟಿದ್ದರು.

ADVERTISEMENT

ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಬಿಜೆಪಿ ನಾಯಕಿ ಉಮಾ ಆನಂದನ್‌  ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿತ್ತು. ಜತೆಗೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತ್ತು.

ಹೈಕೋರ್ಟ್‌ನಿಂದ ಅರ್ಜಿ ತಿರಸ್ಕೃತವಾದದ್ದನ್ನು ಪ್ರಶ್ನಿಸಿರುವ ಉಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಇದೀಗ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್‌ ಚಂದ್ರನ್‌ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ಆಲಿಸಲು ಸಮ್ಮತಿಸಿ, ಅಕ್ಟೋಬರ್‌ 10ಕ್ಕೆ ವಿಚಾರಣೆ ನಿಗದಿಪಡಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.