ADVERTISEMENT

ಪಕ್ಷೇತರರ ಅರ್ಜಿ ಇತ್ಯರ್ಥಪಡಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 19:45 IST
Last Updated 25 ಜುಲೈ 2019, 19:45 IST

ನವದೆಹಲಿ: ವಿಚಾರಣೆ ವೇಳೆ ಹಾಜರಾಗದ ಹಿರಿಯ ವಕೀಲರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಪಕ್ಷೇತರ ಶಾಸಕರ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿತು.

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಂಡ ಕಾರಣ ಅರ್ಜಿಯ ಉದ್ದೇಶ ಈಡೇರಿದೆ. ಹಾಗಾಗಿ ಅರ್ಜಿ ವಾಪಸ್ ಪಡೆಯುವುದಾಗಿ ಅರ್ಜಿದಾರರಾದ ಆರ್‌.ಶಂಕರ್‌ ಹಾಗೂ ಎಚ್‌.ನಾಗೇಶ್‌ ಪರ ಕಿರಿಯ ವಕೀಲೆ ದೀಕ್ಷಾ ರೈ ತಿಳಿಸಿದ್ದರಿಂದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಸಮ್ಮತಿ ಸೂಚಿಸಿದರು. ವಿಚಾರಣೆ ವೇಳೆ ಹಾಜರಿರದ ಹಿರಿಯ ವಕೀಲರಾದ ಮುಕುಲ್ ರೋಹಟ್ಗಿ, ಅಭಿಷೇಕ್‌ ಮನು ಸಿಂಘ್ವಿ ಹಾಗೂ ಕಪಿಲ್‌ ಸಿಬಲ್‌ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT