ADVERTISEMENT

ಸು‍ಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮೂವರ ಪ್ರಮಾಣ

ಪಿಟಿಐ
Published 30 ಮೇ 2025, 6:33 IST
Last Updated 30 ಮೇ 2025, 6:33 IST
ಸು‍ಪ್ರೀಂ ಕೋರ್ಟ್‌
ಸು‍ಪ್ರೀಂ ಕೋರ್ಟ್‌   

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಮೂವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್ ಮತ್ತು ಎ.ಎಸ್. ಚಂದೂರ್ಕರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು.

ADVERTISEMENT

ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ 34 ನ್ಯಾಯಾಧೀಶರ ಪೂರ್ಣ ಬಲ ಮರಳಿ ಬಂದಂತಾಗಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ, ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಷ್ಣೋಯ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಚಂಡೂರ್ಕರ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು.

ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ನೇಮಕಾತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದರು.

ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಹೃಷಿಕೇಶ್ ರಾಯ್ ಅವರ ನಿವೃತ್ತಿಯ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ ಮೂರು ನ್ಯಾಯಾಧೀಶರ ಹುದ್ದೆಗಳಿಗೆ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು.

ನ್ಯಾಯಮೂರ್ತಿ ಅಂಜಾರಿಯಾ ಅವರು 2024ರ ಫೆಬ್ರುವರಿ 25ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.