ADVERTISEMENT

ಕುಲಪತಿ ನೇಮಕದಿಂದ ಸಿಎಂ ಹೊರಗೆ: ನ್ಯಾ. ಧೂಲಿಯಾ ವರದಿ ಬರಲಿ ಎಂದ ಸುಪ್ರೀಂ ಕೋರ್ಟ್

ಪಿಟಿಐ
Published 22 ಸೆಪ್ಟೆಂಬರ್ 2025, 15:35 IST
Last Updated 22 ಸೆಪ್ಟೆಂಬರ್ 2025, 15:35 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಎಪಿಜೆ ಅಬ್ದುಲ್‌ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಕೇರಳ ಡಿಜಿಟಲ್‌ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ಹೆಸರು ಶಿಫಾರಸು ಮಾಡುವ ಸಮಿತಿಯಿಂದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಹೊರಗಿಡಬೇಕು ಎಂದು ಕೋರಿ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಿತು.

‘ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಅವರ ವರದಿ ಬರುವವರೆಗೂ ಕಾಯೋಣ’ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್‌ ಅವರ ಪೀಠವು ಅಭಿಪ್ರಾಯ ವ್ಯಕ್ತಪಡಿಸಿತು. ಅರ್ಜಿಯ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT