
ಮಮತಾ ಬ್ಯಾನರ್ಜಿ
ಪಿಟಿಐ ಚಿತ್ರ
ನವದೆಹಲಿ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಪರ ಎತ್ತಿದ್ದಾರೆ.
ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಆರೋಪಿಸಿದ ಮಮತಾ. ಪ್ರಜಾಪ್ರಭುತ್ವ ಉಳಿಸಲು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವವರನ್ನು ಮರಣ ಹೊಂದಿದ್ದಾರೆ ಎಂದು ನಮೂದಿಸಲಾಗಿದೆ. ಈ ಪ್ರಕ್ರಿಯೆ ಸಂಬಂಧ ಆರು ಬಾರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ನಮಗೆ ಎಲ್ಲೂ ನ್ಯಾಯ ಸಿಗುತ್ತಿಲ್ಲ ಎಂದು ಮಮತಾ ಕೋರ್ಟ್‌ಗೆ ತಿಳಿಸಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆ ವೇಳೆ ಆಧಾರ್ ಕಾರ್ಡ್‌ಗಳನ್ನು ಪರಿಗಣಿಸುತ್ತಿಲ್ಲ. ಬೇರೆ ಪುರಾವೆಗಳನ್ನು ಕೇಳುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಕೋರ್ಟ್‌ನಲ್ಲಿ ಮಾತನಾಡಲು ಅವಕಾಶ ಕೊಟ್ಟಿದ್ದಕ್ಕೆ ಮಮತಾ ಧನ್ಯವಾದ ಸಲ್ಲಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.