ADVERTISEMENT

ಕಾಣೆಯಾದ ಮಕ್ಕಳ ಪತ್ತೆಗೆ ಪ್ರತ್ಯೇಕ ಆನ್‌ಲೈನ್ ಪೋರ್ಟಲ್ ರಚಿಸಿ: ಸುಪ್ರೀಂ ಕೋರ್ಟ್

ಪಿಟಿಐ
Published 24 ಸೆಪ್ಟೆಂಬರ್ 2025, 10:53 IST
Last Updated 24 ಸೆಪ್ಟೆಂಬರ್ 2025, 10:53 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಇಂತಹ ಪ್ರಕರಣಗಳ ತನಿಖೆಗೆ ಗೃಹ ಸಚಿವಾಲಯದ ಅಡಿಯಲ್ಲಿ ಆನ್‌ಲೈನ್ ಪೋರ್ಟಲ್ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದೆ.

ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಾಪತ್ತೆಯಾದ ಮಕ್ಕಳನ್ನು ಪತ್ತೆಹಚ್ಚುವ ಜವಾಬ್ದಾರಿ ಇರುವ ಪೊಲೀಸ್ ಇಲಾಖೆಯಲ್ಲಿ ಸಮನ್ವಯತೆಯ ಕೊರತೆ ಇದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಆರ್. ಮಹದೇವನ್ ಅವರಿದ್ದ ಪೀಠ ಒತ್ತಿ ಹೇಳಿತು.

ADVERTISEMENT

ಈ ಪೋರ್ಟಲ್‌ನಲ್ಲಿ ಪ್ರತಿ ರಾಜ್ಯದಿಂದ ಒಬ್ಬ ಸಮರ್ಪಿತ ಅಧಿಕಾರಿಯನ್ನು ಹೊಂದಬಹುದು, ಅವರು ಮಾಹಿತಿಯನ್ನು ಪ್ರಸಾರ ಮಾಡುವುದರ ಜೊತೆಗೆ ಕಾಣೆಯಾದ ದೂರುಗಳ ಉಸ್ತುವಾರಿ ವಹಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಈ ಬಗ್ಗೆ ಸಮರ್ಪಿತ ಆನ್‌ಲೈನ್‌ ಪೋರ್ಟಲ್ ರಚನೆಗೆ ಸಂಘಟಿತ ಪ್ರಯತ್ನ ನಡೆಸಬೇಕಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.