ADVERTISEMENT

‘ಕಾಲಮಿತಿಯಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ’

ಕೇಂದ್ರಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 18:09 IST
Last Updated 8 ಏಪ್ರಿಲ್ 2019, 18:09 IST
   

ನವದೆಹಲಿ: ಸಿಬಿಐ ನಡೆಸುವ ಪ್ರಕರಣಗಳ ತನಿಖೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ನಿಯಮಾವಳಿಗಳನ್ನು ರೂಪಿಸಲು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್‌ ಗುಪ್ತಾ ಮತ್ತು ಸಂಜೀವ್‌ ಖನ್ನಾ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರ, ಕೇಂದ್ರ ಗುಪ್ತಚರ ಆಯೋಗ ಮತ್ತು ಸಿಬಿಐನಿಂದ ಈ ಕುರಿತು ಪ್ರತಿಕ್ರಿಯೆ ಕೇಳಿದೆ.ವಕೀಲ ಮನೀಶ್‌ ಪಾಠಕ್ ಈ ಅರ್ಜಿ ಸಲ್ಲಿಸಿದ್ದಾರೆ.

ಐದು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿದೆ ಎಂಬುದರ ವಿವರ ನೀಡುವಂತೆ ಸಿಬಿಐಗೆ ಸೂಚಿಸಬೇಕು ಎಂದೂ ಅರ್ಜಿದಾರರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.