ADVERTISEMENT

ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 20:14 IST
Last Updated 7 ಏಪ್ರಿಲ್ 2020, 20:14 IST
   

ನವದೆಹಲಿ: ಬ್ರಿಟನ್‌ನಲ್ಲಿ ಸಿಲುಕಿರುವ ನೂರಾರು ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ಕೇಂದ್ರಕ್ಕೆ ಸೂಚನೆ ನೀಡಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ನೀಡಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ರದ್ದುಗೊಳಿಸಲಾಗಿದೆ. ಈ ಕಾರಣದಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ವಿದ್ಯಾರ್ಥಿಯೊಬ್ಬರ ತಾಯಿ, ವಕೀಲೆ ಮಧುರಿಮಾ ಮ್ರಿದುಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದಾರೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಈ ಸೂಚನೆಗಳನ್ನು ನೀಡಿವಿಚಾರಣೆಯನ್ನು ಏಪ್ರಿಲ್‌ 13ಕ್ಕೆ ಮುಂದೂಡಿದರು.

ಭಾರತದಲ್ಲಿರುವ ಬ್ರಿಟನ್‌ ಪ್ರಜೆಗಳನ್ನು ವಾಪಸ್‌ ಕರೆದುಕೊಂಡು ಹೋಗಲು ವಿಮಾನಗಳನ್ನು ಕಳುಹಿಸಲಾಗುತ್ತಿದ್ದು, ಇವುಗಳಲ್ಲಿ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್‌ ಕರೆತರಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನರ್‌ ಕಚೇರಿಯು ಅಗತ್ಯ ವೈದ್ಯಕೀಯ ಸೇವೆ, ಆಶ್ರಯವನ್ನು ನೀಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.