ಸುಪ್ರೀಂ ಕೋರ್ಟ್
ನವದೆಹಲಿ: ಸ್ನಾಯು ಕ್ಷಯ ಎಂಬ ಅಪರೂಪದ ಕಾಯಿಲೆ ಕುರಿತು ಅರಿವು ಮೂಡಿಸುವುದಕ್ಕಾಗಿ ಮತ್ತು ಚಿಕಿತ್ಸೆಗಾಗಿ ರಾಷ್ಟ್ರೀಯ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ಏಮ್ಸ್ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ಸ್ನಾಯು ಕ್ಷಯದಿಂದ ಬಳಲುತ್ತಿರುವ 251 ಮಕ್ಕಳು ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಸ್ನಾಯುಗಳನ್ನು ದುರ್ಬಲಗೊಳಿಸುವ ಈ ಕಾಯಿಲೆಯಿಂದಾಗಿ ಹಲವರು ನಡೆದಾಡುವ ಸಾಮರ್ಥ್ಯವನ್ನೂ ಕಳೆದುಕೊಳ್ಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.