ADVERTISEMENT

347 ಕ್ಷೇತ್ರಗಳ ಮತಗಳಲ್ಲಿ ವ್ಯತ್ಯಾಸ: ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌

ಪಿಟಿಐ
Published 13 ಡಿಸೆಂಬರ್ 2019, 20:01 IST
Last Updated 13 ಡಿಸೆಂಬರ್ 2019, 20:01 IST
   

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ 347 ಕ್ಷೇತ್ರಗಳಲ್ಲಿ, ಆದ ಮತದಾನ ಹಾಗೂ ಎಣಿಕೆಯಾದ ಮತಗಳಲ್ಲಿನ ವ್ಯತ್ಯಾಸದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ(ಇಸಿಐ)ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ಮತಗಳಲ್ಲಿನ ವ್ಯತ್ಯಾಸದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌(ಎಡಿಆರ್‌) ಮತ್ತು ಕಾಮನ್‌ ಕಾಸ್‌ ಹೆಸರಿನಎರಡು ಸರ್ಕಾರೇತರ ಸಂಸ್ಥೆಗಳು (ಎನ್‌ಜಿಒ) ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರಿದ್ದ ನ್ಯಾಯಪೀಠ, ಫೆಬ್ರುವರಿ 2020ರಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಇದೇ ಅವಧಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT