ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ದೇಣಿಗೆ ಸಂಗ್ರಹಿಸಿರುವ ಕುರಿತು ಸುಪ್ರೀಂ ಕೋರ್ಟ್ ನೇತೃತ್ಬದಲ್ಲಿ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಚುನಾವಣಾ ಬಾಂಡ್ ಮೂಲಕ ಸಂಗ್ರಹಿಸಿರುವ ದೇಣಿಗೆಯ ವಿವರಗಳು ಸುಪ್ರೀಂ ಕೋರ್ಟ್‌ನ ಮಧ್ಯಪ್ರದೇಶದಿಂದ ಬಹಿರಂಗವಾಗಿವೆ. ಚುನಾವಣಾ ಬಾಂಡ್ ವ್ಯವಸ್ಥೆಯನ್ನು ಬಿಜೆಪಿ ಹೇಗೆ ದುರ್ಬಳಕೆ ಮಾಡಿಕೊಂಡಿದೆ ಎಂಬುದು ಬಯಲಿಗೆ ಬಂದಿದೆ. ಈ ಕುರಿತು ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.