ADVERTISEMENT

ಅಕ್ರಮ ಗಣಿಗಾರಿಕೆ: ₹100 ಕೋಟಿ ಠೇವಣಿಗೆ ‘ಸುಪ್ರೀಂ’ ಆದೇಶ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 19:31 IST
Last Updated 3 ಜುಲೈ 2019, 19:31 IST
   

ನವದೆಹಲಿ (ಪಿಟಿಐ): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಿಯಂತ್ರಣಕ್ಕೆ ವಿಫಲವಾದ ಹಿನ್ನೆಲೆಯಲ್ಲಿ ಎನ್‌ಜಿಟಿ ವಿಧಿಸಿರುವ ₹100 ಕೋಟಿ ದಂಡವನ್ನು ಠೇವಣಿ ಇರಿಸುವಂತೆಮೇಘಾಲಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ಪೀಠ, ದಂಡದ ಮೊತ್ತವನ್ನುಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಸಿಬಿಸಿಬಿ) ಜಮಾ ಮಾಡುವಂತೆ ಹೇಳಿದೆ.

ಅಕ್ರಮ ಗಣಿಗಾರಿಕೆ ಮೂಲಕ ಸಂಗ್ರಹಿಸಿರುವ ಕಲ್ಲಿದ್ದಲನ್ನುಕೋಲ್‌ ಇಂಡಿಯಾ ಲಿಮಿಟೆಡ್‌ಗೆ (ಸಿಐಎಲ್‌) ಹಸ್ತಾಂತರಿಸಬೇಕು. ಈ ಕಲಿದ್ದಲನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ರಾಜ್ಯ ಸರ್ಕಾರದಲ್ಲಿ ಠೇವಣಿ ಇರಿಸಬೇಕು ಎಂದು ಕೋರ್ಟ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.