ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ
ನವದೆಹಲಿ : ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.
ಕೋರ್ಟ್ ಆದೇಶವನ್ನು ವಿರೋಧಿಸಿ ನಗರದಲ್ಲಿ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಹಾಗೂ ಶ್ವಾನ ಪ್ರಿಯರು ಶಾಂತಿಯುತ ರ‍್ಯಾಲಿ ನಡೆಸಿದ್ದಾರೆ.
ಬೀದಿ ನಾಯಿಗಳು ನೆರೆಹೊರೆಯ ಭಾಗವಾಗಿದೆ. ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಬದಲು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ಲಸಿಕೆ ನೀಡಿ. ಬೀದಿ ನಾಯಿಗಳನ್ನು ಬೀದಿಗಳಲ್ಲಿಯೇ ಬದುಕಲು ಬಿಡಿ ಎಂದು ಒತ್ತಾಯಿಸಿದರು.
ಪಶ್ಚಿಮ ದೆಹಲಿಯ ಚೋಟಿ ಸಬ್ಜಿ ಮಂಡಿ ಪಾರ್ಕ್‌ನಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಶ್ವಾನ ಪ್ರಿಯರು ಸಾಕು ನಾಯಿಗಳ ಜತೆ ಬಂದಿದ್ದರು.
‘ಪ್ರಾಣಿ ಕಲ್ಯಾಣವೇ ಮಾನವ ಕಲ್ಯಾಣ‘ ಲಸಿಕೆ ಮಾತ್ರ ಸಾಕು. ಬೀದಿ ನಾಯಿಗಳ ಸ್ಥಳಾಂತರ ಬೇಡ ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.