ADVERTISEMENT

ಸುಪ್ರೀಂ ಕೋರ್ಟ್‌ ತೀರ್ಪು ಕನ್ನಡದಲ್ಲಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2019, 4:46 IST
Last Updated 4 ಜುಲೈ 2019, 4:46 IST
   

ನವದೆಹಲಿ: ಸುಪ್ರೀಂ ಕೋರ್ಟ್‌ ತೀರ್ಪುಗಳು ಇನ್ನು ಮುಂದೆ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿವೆ.

ಸದ್ಯ ಇಂಗ್ಲಿಷ್‌ನಲ್ಲಿ ಮಾತ್ರ ತೀರ್ಪಿನ ಪ್ರತಿಗಳು ದೊರೆಯುತ್ತಿವೆ. ಹಿಂದಿ, ತೆಲುಗು, ಕನ್ನಡ, ಅಸ್ಸಾಮಿ, ಒಡಿಯಾ ಭಾಷೆಯಲ್ಲಿರುವ ತೀರ್ಪು
ಗಳನ್ನುಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ರೂಪಿಸಲಾದ ಸಾಫ್ಟ್‌ವೇರ್‌ ಬಳಕೆಗೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ, ಇದೇ ತಿಂಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ತೀರ್ಪುಗಳು ದೊರೆಯುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT