
ನವದೆಹಲಿ ಸಂತ್ರಸ್ತೆಯ ಸ್ತನಗಳನ್ನು ಮುಟ್ಟುವುದು ಮತ್ತು ಪೈಜಾಮಾದ ದಾರವನ್ನು ಎಳೆಯುವುದು ಕೂಡ ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಈ ಮೂಲಕ, ‘ಇಂಥ ವರ್ತನೆಯು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನದ ಅಪರಾಧ ಆಗುವುದಿಲ್ಲ. ಅದು ಕೇವಲ ಅತ್ಯಾಚಾರಕ್ಕೆ ನಡೆಸಿದ ಸಿದ್ಧತೆ’ ಎಂದಿದ್ದ ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ಆದೇಶವನ್ನು ರದ್ದು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ಎನ್.ವಿ.ಅಂಜಾರಿಯಾ ಅವರನ್ನು ಒಳಗೊಂಡ ನ್ಯಾಯಪೀಠವು, ‘ಅಲಹಾಬಾದ್ ಹೈಕೋರ್ಟ್ ಆದೇಶದಲ್ಲಿ ನ್ಯಾಯತತ್ತ್ವವು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅದು ದೋಷಪೂರಿತವಾಗಿದೆ. ಹೀಗಾಗಿ ಇಂಥ ಅಪ್ರಸ್ತುತ ಆದೇಶವನ್ನು ತಳ್ಳಿಹಾಕುವುದು ಸುಪ್ರೀಂ ಕೋರ್ಟ್ ಜವಾಬ್ದಾರಿ’ ಎಂದು ಪ್ರತಿಪಾದಿಸಿದೆ.
ಬಳಿಕ ಪ್ರಕರಣದ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಅತ್ಯಾಚಾರ ಯತ್ನ ಪ್ರಕರಣವನ್ನು ಪುನಃ ದಾಖಲಿಸಲು ಸೂಚಿಸಿತು.
ಕೃತ್ಯವು ಅತ್ಯಾಚಾರಕ್ಕೆ ನಡೆಸಿದ ಸಿದ್ಧತೆಯಷ್ಟೇ ಎಂದು ಹೇಳಿದ ಅಲಹಾಬಾದ್ ಹೈಕೋರ್ಟ್ ನಿರ್ಣಯವನ್ನು ಒಪ್ಪಲಾಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.