ಸುಪ್ರೀಂ ಕೋರ್ಟ್
ನವದೆಹಲಿ: ತಮಿಳುನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆಗೆ ರಾಜ್ಯಪಾಲ ಆರ್.ಎನ್.ರವಿ ಅವರು ಒಪ್ಪಿಗೆ ನೀಡುವ ಬದಲು ರಾಷ್ಟ್ರಪತಿಗೆ ಕಳುಹಿಸಿರುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸ್ವಲ್ಪ ಸಮಯ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಶುಕ್ರವಾರ ತಿಳಿಸಿದೆ.
ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ನಿಗದಿಪಡಿಸಬಹುದೇ ಎಂದು ರಾಷ್ಟ್ರಪತಿಯವರು ಉಲ್ಲೇಖಿಸಿರುವ ಸಾಂವಿಧಾನಿಕ ಪ್ರಶ್ನೆಗಳ ಕುರಿತ ತೀರ್ಪಿನ ನಂತರ ಈ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ಕೆ.ವಿನೋದ ಚಂದ್ರನ್ ಅವರ ಪೀಠ ಹೇಳಿತು. ‘ರಾಷ್ಟ್ರಪತಿಯವರ ಉಲ್ಲೇಖದ ವಿಷಯದ ಕುರಿತ ತೀರ್ಪನ್ನು ನವೆಂಬರ್ 21ರ (ಗವಾಯಿ ಅವರ ನಿವೃತ್ತಿ) ಒಳಗೆ ನೀಡಬೇಕಾಗುತ್ತದೆ. ಆದ್ದರಿಂದ ನೀವು ನಾಲ್ಕು ವಾರಗಳವರೆಗೆ ಕಾಯಬೇಕಾಗುತ್ತದೆ’ ಎಂದು ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.