ನವದೆಹಲಿ: ಶಿಕ್ಷೆಯ ಅವಧಿ ಪೂರ್ಣಗೊಳಿಸಿರುವ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಶಿಕ್ಷೆಯ ಅವಧಿ ಪೂರ್ಣಗೊಂಡಿ ರುವ ಕೈದಿ ಗಳು ಇನ್ನೂ ಜೈಲಿ ನಲ್ಲಿಯೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂತಹ ಕೈದಿಗಳು ಇತರ ಪ್ರಕರಣಗಳಿಗೆ ಸಂಬಂಧಿಸಿ ಬೇಕಾಗಿರದಿದ್ದಲ್ಲಿ, ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ.
2002ರ ನಿತೀಶ್ ಕಟಾರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುಖದೇವ್ ಯಾದವ್ ಅಲಿಯಾಸ್ ಪೆಹಲ್ವಾನ್ ಎಂಬ ಕೈದಿಯ ಬಿಡುಗಡೆ ಮಾಡುವಂತೆ ಆದೇಶ ನೀಡಿದ ವೇಳೆ, ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಕೆ.ವಿ.ವಿಶ್ವನಾಥನ್ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿ, ‘ಯಾದವ್ ಈ ವರ್ಷ ಮಾರ್ಚ್‌ನಲ್ಲಿಯೇ ತನಗೆ ವಿಧಿಸಿದ್ದ 20 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ್ದಾರೆ. ಆ ಬಳಿಕ ಅವರನ್ನು ಬಿಡುಗಡೆ ಮಾಡಬೇಕಿತ್ತು’ ಎಂದು ಹೇಳಿದೆ.
lಯಾವ ವ್ಯಕ್ತಿಯೂ ಆತನ/ಆಕೆಯ ಜೀವನ ಅಥವಾ ವೈಯಕ್ತಿಕ ಸ್ವಾತಂತ್ರ್ಯದಿಂದ ವಂಚಿತರಾಗಬಾರದು
lಸುಪ್ರೀಂ ಕೋರ್ಟ್ ರಿಜಿಸ್ಟ್ರಿ, ಈ ಆದೇಶದ ಪ್ರತಿಯನ್ನು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ರವಾನಿಸಬೇಕು
lಶಿಕ್ಷೆಯ ಅವಧಿ ಪೂರ್ಣಗೊಂಡ ನಂತರವೂ ಸೆರೆವಾಸದಲ್ಲಿರುವವರನ್ನು ಗುರುತಿಸಬೇಕು
lರಾಷ್ಟ್ರೀಯ ಕಾನೂನು ಸೇವೆ ಪ್ರಾಧಿಕಾರಗಳಿಗೂ ಆದೇಶದ ಪ್ರತಿ ಕಳುಹಿಸಬೇಕು. ಪ್ರಾಧಿಕಾರವು ಈ ಆದೇಶದಲ್ಲಿನ ಮಾಹಿತಿಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕಾನೂನು ಸೇವಾ ಪ್ರಾಧಿಕಾರಗಳಿಗೆ ಹಾಗೂ ಜಿಲ್ಲೆಗಳಲ್ಲಿರುವ ಕಾನೂನು ಪ್ರಾಧಿಕಾರಗಳಿಗೆ ಕಳುಹಿಸಬೇಕು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.