ADVERTISEMENT

ಕೇರಳದಲ್ಲಿ ಕೋವಿಡ್‌ ಹೆಚ್ಚಳ: 11ನೇ ತರಗತಿ ಪರೀಕ್ಷೆಗೆ 'ಸುಪ್ರೀಂ' ತಡೆಯಾಜ್ಞೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2021, 12:03 IST
Last Updated 3 ಸೆಪ್ಟೆಂಬರ್ 2021, 12:03 IST
ಕೇರಳದ ತಿರುವನಂತಪುರಂನಲ್ಲಿ ಕೋವಿಡ್‌–19 ಪಾಸಿಟಿವ್‌ ಪತ್ತೆಯಾದ ಪ್ರೌಢಶಾಲೆ ವಿದ್ಯಾರ್ಥಿಗಳು ಏಪ್ರಿಲ್‌ನಲ್ಲಿ ಪರೀಕ್ಷೆ ಬರೆದಿದ್ದರು–ಸಂಗ್ರಹ ಚಿತ್ರ
ಕೇರಳದ ತಿರುವನಂತಪುರಂನಲ್ಲಿ ಕೋವಿಡ್‌–19 ಪಾಸಿಟಿವ್‌ ಪತ್ತೆಯಾದ ಪ್ರೌಢಶಾಲೆ ವಿದ್ಯಾರ್ಥಿಗಳು ಏಪ್ರಿಲ್‌ನಲ್ಲಿ ಪರೀಕ್ಷೆ ಬರೆದಿದ್ದರು–ಸಂಗ್ರಹ ಚಿತ್ರ   

ನವದೆಹಲಿ: ಕೇರಳದಲ್ಲಿ ಹನ್ನೊಂದನೆಯ ತರಗತಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೋವಿಡ್‌–19 ಪ್ರಕರಣಗಳ ಹೆಚ್ಚಳದ ನಡುವೆಯೂ ಕೇರಳ ಸರ್ಕಾರ ಸೆಪ್ಟೆಂಬರ್‌ 6ರಿಂದ ಭೌತಿಕವಾಗಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿತ್ತು.

ಪರೀಕ್ಷೆನಡೆಸುವುದಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆಪ‍್ಟೆಂಬರ್‌ 13ಕ್ಕೆ ನಿಗದಿ ಪಡಿಸಿದೆ.

ನಿತ್ಯ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೇರಳದಲ್ಲಿ ಅಪಾಯದ ಪರಿಸ್ಥಿತಿ ಎದುರಾಗಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯ ಪಟ್ಟಿದೆ. 24 ಗಂಟೆಗಳ ಅಂತರದಲ್ಲಿ ಕೋವಿಡ್‌ ದೃಢಪಟ್ಟ ಸುಮಾರು 35,000 ಪ್ರಕರಣಗಳು ದಾಖಲಾಗುತ್ತಿದ್ದು, ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.